Tue. Apr 22nd, 2025

Belthangady:(ಮೇ.4) ಬೆಳ್ತಂಗಡಿ ತಾಲೂಕು ನಡ ಗ್ರಾಮದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಬೆಳ್ತಂಗಡಿ:(ಎ.22) ನಡ ಗ್ರಾಮದ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.


ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜೃಂಭಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ಮೇ.4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದೆ.

ಕಲ್ಯಾಣೋತ್ಸವವು ಮಾನ್ಯ ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜರುಗಲಿದೆ. ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಶಶಿಧರ್ ಶೆಟ್ಟಿ ಬರೋಡ,

ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಪೂಂಜ ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ, ಉಪಾಧ್ಯಕ್ಷರಾದ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ನವೀನ್ ನೆರಿಯ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *