Tue. Apr 22nd, 2025

Dharmasthala: ಸೇವಾಭಾರತಿ ತಂಡದಿಂದ ರಾಜ್ಯಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ (ಎ. 22): ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಭಾರತ ಸರ್ಕಾರ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಎಪ್ರಿಲ್ 22 ರಂದು ಭೇಟಿ ಮಾಡಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ

ಇದನ್ನೂ ಓದಿ: ⭕ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್!!!

ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವರದಿಯನ್ನು ಸಲ್ಲಿಸಿ ಮನವಿಯನ್ನು ಮಾಡಲಾಯಿತು. ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ, ಕಾರ್ಯದರ್ಶಿ ಶ್ರೀ ಬಾಲಕೃಷ್ಣ, ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ, ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *