Tue. Apr 22nd, 2025

Prithwi Bhat: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್ – ಪ್ರೇಮ ವಿವಾಹಕ್ಕೆ ಬಿಗ್‌ ಟ್ವಿಸ್ಟ್!!

Prithwi Bhat: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಬೈಕ್‌ ಸ್ಕಿಡ್ ಆಗಿ ಸಹಸವಾರೆ ಮೃತ್ಯು!!

ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ (Father) ಆಡಿಯೋ ಮೂಲಕ ಹೊರಹಾಕಿದ್ದಾರೆ.

ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆಯು ಹೇಳಿಕೊಂಡಿದ್ದಾರೆ.

ಗಾಯಕಿ ಪೃಥ್ವಿ ಭಟ್ ಹೇಳಿದ್ದೇನು?
‘ತಪ್ಪಾಯ್ತು ಅಪ್ಪ. ನೀವು ಕಳೆದ ಎರಡು ದಿನಗಳಿಂದ ಹವ್ಯಕ ಗ್ರೂಪ್‌ ಸೇರಿದಂತೆ ಮತ್ತೆ ಬೇರೆ ಬೇರೆ ಗ್ರೂಪ್‌ಗಳಲ್ಲಿ ನರಹರಿ ದೀಕ್ಷಿತ್ ಸರ್ ಬಗ್ಗೆ ಮತ್ತೆ ನನ್ನ ಬಗ್ಗೆ ಆಡಿಯೋ ಮೆಸೇಜ್ ಕಳುಹಿಸುತ್ತಿದ್ದೀರಿ. ಈ ವಿಷಯದಲ್ಲಿ ನರಹರಿ ದೀಕ್ಷಿತ್ ಸರ್‌ ಅವರ ತಪ್ಪು ಏನಿಲ್ಲ. ಮಾರ್ಚ್ 7ಕ್ಕೆ ದೀಕ್ಷಿತ್ ಸರ್ ಮನೆಗೆ ಬಂದಿದ್ದು, ಈ ವಿಷಯ ಬಗ್ಗೆ ಮಾತನಾಡಿದರು. ಆಗ ನಾನು ಅವರ ಎದುರು ಹಾಗೂ ನಿಮ್ಮ ಎದುರು ಅಭಿ ಇಷ್ಟ ಅಂತನೇ ಹೇಳಿದ್ದು. ಅವತ್ತು ನಿಮ್ಮ ಮೇಲಿನ ಭಯಕ್ಕೆ ನಾನು ಸುಮ್ಮನಾದೆ, ಆದರೆ ನನ್ನ ಮನಸಿನಲ್ಲಿ ಅಭಿ ಇದ್ದರು. ಅದಾದ ಮೇಲೆ ನೀವು ನನ್ನನ್ನು ಕಟ್ಟುನಿಟ್ಟು ಮಾಡಿದಿರಿ.

ಕಾರ್ಯಕ್ರಮಗಳಿಗೆ ಹೋಗುವುದು ಬೇಡ ಅಂದಿರಿ. ಸಂಗೀತ ಬೇಡ ಅಂತಾ ಹೇಳಿದಿರಿ ಅದಕ್ಕೆ ಭಯಪಟ್ಟು ನಾನೇ ಈ ನಿರ್ಧಾರ ಮಾಡಿರುವುದು. ನಾನು ಮೊದಲು ಹೇಳಿದ ಹಾಗೆ ಈಗಲೂ ಹೇಳುತ್ತಿದ್ದೇನೆ. ನರಹರಿ ದೀಕ್ಷಿತ್ ಸರ್‌ ಅವರ ತಪ್ಪು ಏನಿಲ್ಲ. ನಮ್ಮ ಮದುವೆಯ ದಿನ ಅವರಿಗೆ ಗೊತ್ತಿರಲಿಲ್ಲ. ಆಮೇಲೆ ನಾನು ಫೋನ್‌ ಮಾಡಿ ಬರಲು ಹೇಳಿದ್ದು, ಆಮೇಲೆ ಅವರು ನನಗೆ ಅಭಿಗೆ ಆಶೀರ್ವಾದ ಮಾಡಿದರು. ಇದರಲ್ಲಿ ಅವರ ತಪ್ಪಿಲ್ಲ. ನಾನು ಮಾಡಿರುವುದು ಖಂಡಿತಾ ತಪ್ಪು, ಕ್ಷಮಿಸಿ’ ಎಂದು ಪೃಥ್ವಿ ಭಟ್ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗುತ್ತಿದೆ.

Leave a Reply

Your email address will not be published. Required fields are marked *