Terrorist: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ. ಇತ್ತ, ಬಾರಾಮುಲ್ಲಾದಲ್ಲಿ ಗಡಿ ನುಸುಳಿ ಬಂದಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: 🌺ಬಂದಾರು : ಪುತ್ತಿಲಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ
ಉಗ್ರ ನಿಗ್ರಹ ಕಾರ್ಯಾಚರಣೆಯ ವೇಳೆ ಭದ್ರತಾ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನ ಗಡಿಯಿಂದ ಒಳನುಸುಳಿ ಬರುತ್ತಿದ್ದ ವೇಳೆ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು. ಭಯೋತ್ಪಾದಕರ ಒಳನುಸುಳುವಿಕೆಯನ್ನು ಸೇನಾ ಪಡೆಯು ತಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಭಯೋತ್ಪಾದಕರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಪ್ರವಾಸಿಗರ ಮಾರಣಹೋಮ:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ ಲ್ಯಾಂಡ್’ ಎಂದೇ ಪ್ರಸಿದ್ಧವಾಗಿರುವ ಹುಲ್ಲುಗಾವಲು ಪ್ರದೇಶದಲ್ಲಿ ಭಯೋತ್ಪಾದಕರು ಕಂಡ ಕಂಡ ಪ್ರವಾಸಿಗರ ಮೇಲೆ ಗುಂಡು ಹಾರಿಸಿ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ಇಬ್ಬರು ಕನ್ನಡಿಗರು, ನೌಕಾಪಡೆ, ಗುಪ್ತಚರ ದಳ ಅಧಿಕಾರಿ ಸಾವನ್ನಪ್ಪಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಈ ದಾಳಿಯ ಹೊಣೆ ಹೊತ್ತಿದೆ.
