ಮಂಗಳೂರು:(ಎ.24) ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ.
ಇದನ್ನೂ ಓದಿ: ⭕ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!!!


ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ.


ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್ (35) ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್‌ನತ್ತ ಬಸ್‌ನಲ್ಲಿ ತೆರಳುತ್ತಿದ್ದ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

