ಧರ್ಮಸ್ಥಳ: (ಎ.26) ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು 15 ಲಕ್ಷ ದೇಣಿಗೆಯ ಚೆಕ್ ಅನ್ನು ಶರತ್ ಕೃಷ್ಣ ಪಡ್ವೆಟ್ನಾಯರವರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ: ⭕ಬೆಳ್ತಂಗಡಿ: ಇನ್ವರ್ಟರ್ ನೀಡುವ ವಿಚಾರಕ್ಕೆ ಎರಡು ತಂಡಗಳ ನಡುವೆ ಹೊಡೆದಾಟ
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,



ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ.ಮೋಹನ್ ಕುಮಾರ್, ರಾಘವೇಂದ್ರ ಬೈಪಾಡಿತ್ತಾಯ, ಮಂಜುನಾಥ್ ಕಾಮತ್, ಗಣೇಶ್ ಇಂಜಿನಿಯರ್, ರವಿ ಚಕ್ಕಿತ್ತಾಯ , ರಾಮಣ್ಣ ಗೌಡ, ವಿಶ್ವನಾಥ ಶೆಟ್ಟಿ, ಸಂಜೀವ ರಾಘವೇಂದ್ರ ಪ್ರಿಂಟರ್ಸ್, ರಾಘವೇಂದ್ರ ಗೌಡ ಪಾರ, ರವೀಂದ್ರ ಶೆಟ್ಟಿ, ಪ್ರಶಾಂತ್ ಜೈನ್, ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

