Sat. Apr 26th, 2025

Puttur: ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪ – ರಸ್ತೆ ತಡೆ ನಡೆಸಿ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು:(ಎ.26) ಸರಕಾರಿ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಆರೋಪದ ಹಿನ್ನಲೆ ರಸ್ತೆ ತಡೆ ನಡೆಸಿ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: 🟣ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ 15 ಲಕ್ಷ ದೇಣಿಗೆ

ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿದ ವೈದ್ಯರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಹಲ್ಲೆಗೆ ಯತ್ನ ನಡೆಸಿದ ಆರೋಪಿಗಳಾದ ಜೊಹರಾ ಮತ್ತು ಸಮಾದ್ ಬಂಧಿಸುವಂತೆ ಒತ್ತಾಯ ಮಾಡಿದರು.

ಸಂಘಟನೆಗಳ ಒತ್ತಡಕ್ಕೆ ಮಣಿದು ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ, ಶಾಸಕ ಅಶೋಕ್ ಕುಮಾರ್ ರೈ ಘಟನಾ ಸ್ಥಳಕ್ಕೆ ಆಗಮಿಸಿದರು. ಪ್ರತಿಭಟನಾಕಾರರು ಶಾಸಕ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಇಂದು ಸಂಜೆ 6 ಗಂಟೆಗೆ ಒಳಗೆ ಆರೋಪಿಗಳನ್ನು ಬಂಧಿಸುವ ಭರವಸೆಯನ್ನು ಶಾಸಕ ಮತ್ತು ಡಿವೈಎಸ್ಪಿ ನೀಡಿದರು. ಅಧಿಕಾರಿಗಳ ಭರವಸೆ ಹಿನ್ನಲೆಯಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ವಾಪಾಸು‌ ಪಡೆದರು. ಇಂದು ಸಂಜೆ ಒಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಪುತ್ತೂರು ತಾಲೂಕಿನಾದ್ಯಂತ ವೈದ್ಯಕೀಯ ಸೇವೆ ನಿಲುಗಡೆಗೆ ವೈದ್ಯರ ನಿರ್ಧಾರ, ಆರೋಪಿಗಳನ್ನು ಬಂಧಿಸದಿದ್ದರೆ ಸೋಮವಾರ ಪುತ್ತೂರು ತಾಲೂಕು‌ ಬಂದ್ ಗೆ ಹಿಂದೂ ಸಂಘಟನೆಗಳ ಎಚ್ಚರಿಕೆ ನೀಡಿದರು.

ಏನಿದು ಘಟನೆ?:

ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಪುತ್ತೂರಾಯರವರು ವಾರ್ಡ್‌ಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ತೊಂದರೆ ಅಗುತ್ತಿದೆ ಎಂದಾಗ ಅಲ್ಲಿದ್ದ ಮಹಿಳೆ ಹಾಗೂ ಅವರ ಮಗ ಏಕಾಏಕಿ ವೈದ್ಯೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ನಂತರ ಬಿಟ್ಟಿದ್ದಾರೆ. ಇದಕ್ಕೆ ಆರೋಪಿಯ ಜೊತೆ ಮಗು ಇದೆ ಕಾರಣ ನೀಡಿರುವುದು ಖಂಡನೀಯ.ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು