Mon. Apr 28th, 2025

Nelyadka: 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ನೇಲ್ಯಡ್ಕ (ಎ.28): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಏಪ್ರಿಲ್ 27 ರಂದು ನೇಲ್ಯಡ್ಕದಲ್ಲಿ ನಡೆಯಿತು.

ಇದನ್ನೂ ಓದಿ: 🟣ಪಾಂಗಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರ ಸಾಮಾಜಿಕ ಕಳಕಳಿಯ ದೃಷ್ಟಿಯಿಂದ ಪಾಂಗಳ ಹಿರಿಯ ನಾಗರೀಕರ ಆಶ್ರಯದ ಆಸರೆಗೆ 2 ಲಕ್ಷ ರೂ.ದೇಣಿಗೆ

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ.ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ, ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಶ್ರೀಮತಿ ವಸಂತಿ ಕೆ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಶ್ರೀಮತಿ ಬಬಿತಾ, ಟೈಲರಿಂಗ್ ತರಬೇತುದಾರರು ಶ್ರೀಮತಿ ಹರಿಣಾಕ್ಷಿ ಬಿ.ಪಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 27 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕೃಷಿ ಉದ್ಯೋಗ ಸಖಿ ಗೀತಾ, ಪಶು ಸಖಿ ವೇದಾವತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಅಮಿತ ಪ್ರಾರ್ಥನೆಯನ್ನು ಮಾಡಿ, ಕಾರ್ಯಕ್ರಮದಲ್ಲಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ನೀತಾ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಕೋ – ಆರ್ಡಿನೇಟರ್ ಸುಮ ನಿರೂಪಿಸಿ. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹೇಮಲತಾ ಧನ್ಯವಾದವಿತ್ತರು.

Leave a Reply

Your email address will not be published. Required fields are marked *