ವಿಟ್ಲ:(ಎ.28) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ.) ವಿಟ್ಲದ ಯೋಜನಾ ಕಚೇರಿಯ ನೂತನ ಯೋಜನಾಧಿಕಾರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಯೋಜನಾ ಕಚೇರಿಯಿಂದ ವರ್ಗಾವಣೆಗೊಂಡ ಸುರೇಶ್ ಗೌಡ ಅಧಿಕಾರ ಸ್ವೀಕರಿಸಿದರು.

ಇದನ್ನೂ ಓದಿ: 🟠ಉಡುಪಿ: ಬೇಬಿ ಮಾನ್ಸಿ ಎಸ್. ಪೂಜಾರಿಯವರಿಗೆ ಕರ್ನಾಟಕ ಬಾಲ ಕಲಾ ಪ್ರತಿಭಾ ಪುರಸ್ಕಾರ
ಈ ಹಿಂದೆ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಧರ್ಮಸ್ಥಳ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡ ಯೋಜನಾಧಿಕಾರಿ ರಮೇಶ್ ಅಧಿಕಾರ ಹಸ್ತಾಂತರ ಮಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ವಿಮಾ ಸಮನ್ವಯಧಿಕಾರಿ ಜನಾರ್ಧನ, ಮುಡಿಪು ವಲಯ ಮೇಲ್ವಿಚಾರಕಿ ಪ್ರೇಮಲತಾ, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪ , ಫಂಡ್ ಮ್ಯಾನೇಜರ್ ರತ್ನಾವತಿ, ಅಸಿಸ್ಟೆಂಟ್ ಮ್ಯಾನೇಜರ್ ವಾಣಿ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


