ಬೆಳ್ತಂಗಡಿ:(ಮೇ.1) ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು,

ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಶಿವರಾಂ ಹೇಳಿದರು.




