ಉಜಿರೆ:(ಮೇ.1) ರಸ್ತೆ ದಾಟುತ್ತಿದ್ದ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇದನ್ನೂ ಓದಿ: 🛑ಬೆಳ್ತಂಗಡಿ: ಮನೆಯ ಮೇಲೆ ಬಿದ್ದ ಭಾರೀ ಗಾತ್ರದ ಮರ
ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂಬವರಾಗಿದ್ದಾರೆ.

ಎ.29 ರಂದು ನಾರಾಯಣ ಪೂಜಾರಿ ಅವರು ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ನಾರಾಯಣ ಪೂಜಾರಿಯವರ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.


ಆದರೆ ಎ.29 ರಂದು ಸಂಜೆಯ ವೇಳೆ ಅವರು ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಉಮೇಶ್ ನಾಯ್ಕ ಪಾದಚಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ. ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

