ಮಂಗಳೂರು, (ಮೇ.02): ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದರು.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದನು. ಸಹಾಸ್ ಶೆಟ್ಟಿ ವಿರುದ್ಧ ಹಲವು ಕೊಲೆ, ಕೊಲೆಯತ್ನ ಕೇಸ್ಗಳು ದಾಖಲಾಗಿದ್ದವು. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




