ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಆರೋಪಿಯಾಗಿರುವ, ಹಿಂದೂ ಕಾರ್ಯಕರ್ತನಾಗಿರುವ ಭರತ್ ಕುಮ್ಡೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದ್ದು, ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ.
ಸುಹಾಸ್ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೋಸ್ಟ್ ಹಾಕಿದ್ದು, ಅದರ ಬದಿಯಲ್ಲಿ ಭರತ್ ಅವರ ಫೋಟೋವನ್ನು ಹಾಕಲಾಗಿದೆ.
ಭರತ್ ಮಾತ್ರವಲ್ಲದೆ, ಸುಹಾಸ್ ಕೊಲೆ ಬಳಿಕ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಸೇರಿದಂತೆ 3 ರಿಂದ 5 ಮಂದಿ ಹಿಂದೂ ಮುಖಂಡರಿಗೆ ಜೀವ ಬೆದರಿಕೆಯನ್ನು ಹಾಕಲಾಗಿದೆ ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯ ಪೋಸ್ಟ್ ವೈರಲ್ ಆಗಿದ್ದು, ಪೊಲೀಸರು ಸಂಬಂಧ ಪಟ್ಟವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.




