Wed. May 7th, 2025

Mangalore: ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್!!!

ಮಂಗಳೂರು:(ಮೇ. 6)ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಮತ್ತೊಂದು ಕೋಮು ಕಿಚ್ಚಿನ ಪೋಸ್ಟ್ ಒಂದು ದಕ್ಷಿಣ ಕನ್ನಡದಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ: ⛔ಪುತ್ತೂರು: ಉದ್ಯಮಿ ರಾಜಾರಾಂ ಭಟ್ ಹೃದಯಾಘಾತದಿಂದ ನಿಧನ

ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ’ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.

ಹೋಟೆಲ್, ಪಬ್, ಬಾರ್‌ಗಳು, ಫುಟ್‌ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುತ್ತೇವೆ” ಎಂದು ಭರತ್ ಕುಮ್ಡೇಲ್ ಹೆಸರು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದರು. ಹೀಗಾಗಿ, ಸೋಮವಾರವೇ ಮಂಗಳೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಹಾಗೂ ಫುಟ್ಬಾತ್ ವ್ಯಾಪಾರಿಗಳನ್ನು ರಾತ್ರಿ 9:30ರ ಒಳಗೆ ತೆರವುಗೊಳಿಸುವ ಪ್ರಕ್ರಿಯೆ ಶುರುವಾಗಿತ್ತು. ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *