ಉಜಿರೆ 🙁 ಮೇ.08 ) ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ,

ಇದನ್ನೂ ಓದಿ: 🌺🌺ಪುತ್ತೂರು: ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ
ದೇಶಕ್ಕೆ ಒಳಿತಾಗಲಿ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.




ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

