ಬೆಳ್ತಂಗಡಿ:(ಮೇ.9) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ “ಧಿಕ್ಕಾರ ಆಪರೇಷನ್ ಸಿಂಧೂರ್(dikkaraoperationsindura)” ಎಂದು ಮೇ 08 ರಂದು ಪೋಸ್ಟ್ ಹಾಕಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಡಿಲೀಟ್ ಮಾಡಿದ್ದಾಳೆ.
ಇದನ್ನೂ ಓದಿ: 🟣ಕಲ್ಮಂಜ: ಪುರಾತನ ಕಾಲದ ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ಪ್ರಾರ್ಥನೆ



ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ʼನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕುʼ “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ…ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತ್ತಲು…ಎಲ್ಲೆಲ್ಲೂ ಕತ್ತಲು..!#dikkraoperationsindura ಹ್ಯಾಷ್ ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ವೈರಲ್ ಆದ ಬೆನ್ನಲ್ಲೇ ” ಭಾರತ ದೇಶದ ಮೇಲೆ ಅಪಾರ ಪ್ರೀತಿ ಇದೆ ಗೌರವವಿದೆ. ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ. ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ. ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದನ್ನು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ.



ಯಾವುದೇ ಯುದ್ಧ ಆದಾಗ ಮಡಿಯುವವರು ಒಂದೆಡೆಯಾದರೆ ಆಯಾ ದೇಶದ ಬಹುತೇಕರು ವಿವಿಧ ಕಾರಣಗಳಿಗಾಗಿ ನೋವು ಅನುಭವಿಸುವಂತಾಗುತ್ತದೆ. ಭಾರತದ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳದಿರಲಿ, ಶಾಮತಿ, ಸೌಹಾರ್ದ ನೆಲೆಸಲಿ. ಭಯೋತ್ಪಾದನೆ ನಿರ್ಮೂಲನೆಯಾಗಲಿ. ಸಾವು ನೋವು ಇಲ್ಲದಾಗಲಿ ಎನ್ನುವುದಷ್ಟೇ ನನ್ನ ಉದ್ದೇಶʼ ಎಂದು ರೇಷ್ಮಾ ಹೊಸದಾಗಿ ಪೋಸ್ಟ್ ಮಾಡಿದ್ದಾರೆ.
ರೇಷ್ಮಾ ಮಾಡಿದ ಪೋಸ್ಟ್‌ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲು ಮಾಡುವಂತ ಒತ್ತಡ ಹೇರಿದ್ದಾರೆ.

ವಿದ್ಯಾರ್ಥಿನಿಯ ಅಮಾನತಿಗೆ ಎಬಿವಿಪಿ ಒತ್ತಾಯ ಮಂಗಳೂರು ವಿವಿಯ ಕನ್ನಡ ವಿಭಾಗದ ವಿದ್ಯಾರ್ಥಿನಿ ರೇಷ್ಮಾಳನ್ನು ಅಮಾನುತುಗೊಳಿಸುವಂತೆ ಮಂಗಳೂರು ವಿವಿ ಎಬಿವಿಪಿ ಒತ್ತಾಯ ಮಾಡಿದ್ದು ಮನವಿ ಸಲ್ಲಿಸಿದೆ. ಇಂತಹ ದೇಶದ್ರೋಹದ ಮನಸ್ಥಿತಿಯನ್ನು ಪ್ರಾರಂಭಿಕ ಹಂತದಲ್ಲೇ ಹೊಸುಕಿ ಹಾಕುವಂತೆ ಒತ್ತಾಯಿಸಿದ್ದಾರೆ.
