Tue. Jul 1st, 2025

Bandaru: 2024 -25 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಗೆ ಅಭಿನಂದನೆ

ಬಂದಾರು :(ಮೇ.13) ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ,

2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ,

ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಏನ್ ಭವಾನಿ ಶಂಕರ್, ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಶಾಂತ್ ಬಳೆಂಜ,ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಸಹಾಯಕ ನಿರ್ದೇಶಕರಾದ ಸಫನಾ ರವರು ಗೌರವ ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ.ಜಿ, ಸಿಬ್ಬಂದಿ ಪ್ರವೀಣ್, ನರೇಗಾ ಯೋಜನೆಯ ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್) ಶರಣ್ ರೈ, ತಾಂತ್ರಿಕ ಸಹಾಯಕರಾದ ಕು. ಪ್ರಾರ್ಥನ, ಇವರುಗಳು ಪ್ರಶಸ್ತಿ ಸ್ವೀಕರಿಸಿದರು.

Leave a Reply

Your email address will not be published. Required fields are marked *