ಧರ್ಮಸ್ಥಳ: (ಮೇ.14) ಹಾವು ಕಚ್ಚಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಶಾಂತಾ (68ವ) ಮೃತಪಟ್ಟ ಮಹಿಳೆ.
ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.





