ಮಂಗಳೂರು:(ಮೇ.14) ಕಾಸರಗೋಡು ಮೂಲದ ಬಾಲಕಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡಿನ ವಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯೊಬ್ಬಳನ್ನು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿತ್ತು.

ಇದನ್ನೂ ಓದಿ: 🟠ಉಜಿರೆ : ಸಿ.ಬಿ.ಎಸ್.ಇ ಫಲಿತಾಂಶ- ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತೇರ್ಗಡೆ
ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇನ್ನು ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಸುಮಾರು ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದಳು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.


ಪ್ರಾಥಮಿಕ ತನಿಖೆಯ ಪ್ರಕಾರ, ಗರ್ಭಪಾತ ಮಾಡಿಕೊಳ್ಳಲು ಯಾವುದೋ ಔಷಧವನ್ನು ಸೇವಿಸಿರಬಹುದೆಂಬ ಗಂಭೀರ ಶಂಕೆ ವ್ಯಕ್ತವಾಗಿದೆ. ಈ ಔಷಧದ ಅಡ್ಡಪರಿಣಾಮದಿಂದ ತೀವ್ರ ರಕ್ತಸ್ರಾವ ಉಂಟಾಗಿ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


