ಮಂಗಳೂರು :(ಮೇ.15) ಗ್ರಾಮ ಪಂಚಾಯತ್ ವೊಂದರ ಮಾಜಿ ಕಾರ್ಯದರ್ಶಿಯಿಂದ ಲಂಚ ಸ್ವೀಕರಿಸುತ್ತಿರುವಾಗಲೇ ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಸಿಬ್ಬಂದಿಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ ಘಟನೆ ಬುಧವಾರ ನಡೆದಿದೆ.

ಇದನ್ನೂ ಓದಿ: 🛑”ಎರಡು ಕ್ವಾಟರ್ ಕೊಡಿಸಿದರೆ ಯಾರು ಬೇಕಾದರೂ ಒಳ್ಳೆಯವನು ಎನ್ನುತ್ತಾನೆ”
ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಮತ್ತು ಖಜಾನೆಯ ಎಫ್‌ಡಿಎ ಬಸವಗೌಡ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಆರೋಪಿಗಳಾಗಿದ್ದಾರೆ.
ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರಲ್ಲಿ ಕಾರ್ಯದರ್ಶಿಯಾಗಿದ್ದ ದೂರುದಾರರು 2023ರ ಅಕ್ಟೋಬರ್‌ನಲ್ಲಿ ವಯೋನಿವೃತ್ತಿ ಹೊಂದಿದ್ದರು. 2024ರ ಜೂನ್‌ನಲ್ಲಿ ಅವರ ಪತಿ ನಿಧನರಾಗಿದ್ದರು. ಗಂಡನ ಮರಣ ಉಪದಾನದ ಬಗ್ಗೆ ದೂರುದಾರರು ಖಜಾನೆಯ ಕಚೇರಿಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರಲಿಲ್ಲ ಎನ್ನಲಾಗಿದೆ.





