Sun. May 18th, 2025

Belthangady: ಧರ್ಮಸ್ಥಳ ಮೂಲದ ಆಕಾಂಕ್ಷ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು

ಬೆಳ್ತಂಗಡಿ:(ಮೇ.18) ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಕಾಶಿಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸಿವಿಲ್ ಗುತ್ತಿಗೆದಾರ ಸುರೇಂದ್ರ ಮತ್ತು ಜೆಡಿಎಸ್ ಮಾಜಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಅವರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಜೆಟ್ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು.

ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಮನೆಯವರಿಗೆ ಕರೆ ಮಾಡಿದ್ದ ಆಕಾಂಕ್ಷ, ನಾನು ಮಿತ್ರನೊಬ್ಬನ ಜೊತೆ ಕಾಲೇಜಿಗೆ ತೆರಳುತ್ತಿದ್ದೇನೆ. ಅವನೇ ನನ್ನನ್ನು ಬೈಕಿನಲ್ಲಿ ಬಿಟ್ಟುಬಂದಿದ್ದಾರೆ ಎಂದು ತಿಳಿಸಿದ್ದಳು.

ಕಾಲೇಜು ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿಯೂ ಕಾಲ್ ನಲ್ಲಿ ಕೊನೆಯದಾಗಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ‌ ಕಾಲೇಜಿನ ಮೂರನೇ ಮಹಡಿಯಿಂದ ಕೆಳಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇವಿಷ್ಟು ಪ್ರಾಥಮಿಕ ಮಾಹಿತಿಯಾಗಿದೆ. ಈ ಬಗ್ಗೆ ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬದವರು ರಾತ್ರಿಯೇ ವಿಮಾನದ ಮೂಲಕ ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಆಕಾಂಕ್ಷ ಸಿಂಧೂ ದೇವಿ ಅವರ ಏಕೈಕ ಹೆಣ್ಣು ಮಗಳು. ದಂಪತಿಯ ಗಂಡು ಮಗನಿಗೆ ಕೆಲ ತಿಂಗಳುಗಳ ಹಿಂದಷ್ಟೇ ಕೇರಳದಲ್ಲಿ ಅದ್ದೂರಿ ವಿವಾಹವಾಗಿ, ಮಂಗಳೂರಿನಲ್ಲಿ ಔತಣಕೂಟ ಕೂಡ ಆಗಿತ್ತು.

Leave a Reply

Your email address will not be published. Required fields are marked *