Mon. May 19th, 2025

Gundya: ಕೆಎಸ್‌ಆರ್‌ಟಿಸಿ ಬಸ್ & ಲಾರಿ ನಡುವೆ ಭೀಕರ ಅಪಘಾತ – ಬೆಳಾಲು ನಿವಾಸಿ ಬಸ್ ಚಾಲಕ ಸೇರಿದಂತೆ ನಾಲ್ವರಿಗೆ ಗಾಯ

ಗುಂಡ್ಯ:(ಮೇ.19) ಮೇ 18 ರ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ: 🛑ಬೆಳ್ತಂಗಡಿ: ಧರ್ಮಸ್ಥಳದ ಯುವತಿ ಆಕಾಂಕ್ಷಾ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.

ಘಟನೆಯ ವಿವರ:

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ.

ಗಾಯಾಳುಗಳು:
ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ಸು ಚಾಲಕ ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ಕಾಶಿಬೆಟ್ಟು ನಿವಾಸಿ ಪ್ರಣಯ್ ಮತ್ತು ಕನಕಪುರ ನಿವಾಸಿ ಮಂಜುನಾಥ ಗಾಯಗೊಂಡವರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *