Tue. May 20th, 2025

Belthangadi: ಆಕಾಂಕ್ಷ ಆತ್ಮಹತ್ಯೆ ಪ್ರಕರಣ – ಆರೋಪಿ ಪ್ರೊಫೆಸರ್ ಅರೆಸ್ಟ್

ಬೆಳ್ತಂಗಡಿ :(ಮೇ.20) ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 🛑ಬೆಳ್ತಂಗಡಿ: ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ ಕಾಂಗ್ರೆಸ್‌ – ಪ್ರತಾಪ್‌ ಸಿಂಹ ನಾಯಕ್

ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು, ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು, ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು, ಅಲ್ಲಿಂದ ಧರ್ಮಸ್ಥಳ ಬೊಳಿಯಾರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.

Leave a Reply

Your email address will not be published. Required fields are marked *