ಗುಂಡ್ಯ:(ಮೇ .20) ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮೇ 20 ರಂದು ನಡೆದಿದೆ.

ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ.



ಎರಡು ದಿನಗಳ ಹಿಂದೆ, ಭಾನುವಾರ (ಮೇ 18) ರಂದು ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಸೇರಿ ನಾಲ್ವರು ವ್ಯಕ್ತಿಗಳು ಗಾಯಗೊಂಡಿದ್ದರು.


