Fri. May 23rd, 2025

Vitla: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು

ವಿಟ್ಲ:(ಮೇ.23) ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.

ಇದನ್ನೂ ಓದಿ: 🔴ಉಜಿರೆ: (ಮೇ.25) ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.
ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *