ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಧರ್ಮಸ್ಥಳ , ಗ್ರಾಮೀಣ ಶ್ರೇಷ್ಠತಾ ಕೇಂದ್ರ ಲಾಯಿಲದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯಾಭಿವೃದ್ಧಿ ತರಬೇತಿ ಉದ್ಘಾಟನೆ ನಡೆಯಿತು.

ಗೌರವಾನ್ವಿತ ಶ್ರೀಮತಿ ಶ್ರದ್ಧಾ ಅಮಿತ್ ರವರು ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯಾಭಿವೃದ್ಧಿ ತರಬೇತಿ ಉದ್ಘಾಟಿಸಿ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ , ಜ್ಞಾನವಿಕಾಸ ಕಾರ್ಯಕ್ರಮ ನಿರ್ದೇಶಕರಾದ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಯಾಧಿಕಾರಿಗಳು ಉಪಸ್ಥಿತರಿದ್ದರು.



