Wed. May 28th, 2025

Puttur: ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ – ಮೂವರಿಗೆ ಗಂಭೀರ ಗಾಯ

ಪುತ್ತೂರು: (ಮೇ.27) ಪುತ್ತೂರಿನ ಮುರ ಸಮೀಪ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ. 27 ರಂದು ನಡೆದಿದೆ.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಪುತ್ತೂರು ಸಂಚಾರಿ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *