ಉಜಿರೆ: (ಮೇ.27) ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಇದನ್ನೂ ಓದಿ: ☘ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗದ ಸೇವಾಭಾರತಿ ಸಂಯೋಜಕ ಹಾಗೂ ‘ದಿಶ’ ಯೋಗ ಸಂಸ್ಕಾರ ಮತ್ತು ಆಧ್ಯಾತ್ಮ ಶಿಕ್ಷಣ ತರಬೇತುದಾರ ಶ್ರೀ ಚಂದ್ರಶೇಖರ್ ಪುತ್ತೂರು ಯೋಗಾಭ್ಯಾಸದ ಜೊತೆಗೆ ಮನಸ್ಸಿನ ನಿಯಂತ್ರಣ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.


ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಧುರ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಮಿಮ್ ಬಾನು ವಂದಿಸಿದರು.


