ಮಂಗಳೂರು:(ಮೇ.29) ಬಂಟ್ವಾಳದಲ್ಲಿ ಅಬ್ದುಲ್ ರಹಿಂ ನನ್ನು ಕೊಲೆಗೈದ ಆರೋಪದ ಮೇರೆಗೆ ಸ್ಥಳೀಯನೇ ಆದ ಪರಿಚಯದ ದೀಪಕ್ ಸಹಿತ ಮೂವರನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಕೊಲೆಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಇವರು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಪ್ರಕರಣದ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸುತ್ತಿದ್ದಾರೆ. ಅಬ್ದುಲ್ ರಹೀಂ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಪೈಕಿ ದೀಪಕ್ ಎಂಬಾತ ಅಬ್ದುಲ್ ರಹಿಂ ಪರಿಚಯಸ್ಥ ಎನ್ನಲಾಗಿದೆ.


