Tue. Jun 3rd, 2025

Suicide: ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ ನೋಟ್‌ ನಿಂದ ಬಯಲಾಯ್ತು ಸತ್ಯ..!

ಕೊಡಗು:(ಮೇ.29) ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.

ಇದನ್ನೂ ಓದಿ: ☘ಕರಾಯ: ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಕರಾಯದಲ್ಲಿ 7 ದಿನಗಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ತಾಲೂಕಿನ ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಸಂಜೆ 4:30ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಒಳಗಿನಿಂದ ಬಾಗಿಲು ಹಾಕಿಕೊಂಡಿತ್ತು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾಳೆ. ನಂತರ ಬಾಗಿಲು ತೆಗೆದು ನೋಡಿದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈಕೆ ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Leave a Reply

Your email address will not be published. Required fields are marked *