ಉಜಿರೆ: (ಮೇ.29) ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಇದನ್ನೂ ಓದಿ: ⭕Abdul Murder Case: ಅಬ್ದುಲ್ ರಹೀಂ ಕೊಲೆ ಪ್ರಕರಣ.!
ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಯ ಸಾಫ್ಟ್‌ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ.ಸಿಜು ಥಾಮಸ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ವಂದಿಸಿದರು.



