Wed. Jun 4th, 2025

Puttur: ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ನಿರ್ಧಾರ – ವಿಚಾರಣೆಗೆ ಆಗಮಿಸುವಂತೆ ನೋಟಿಸ್ ಜಾರಿ

ಪುತ್ತೂರು :(ಜೂ.2) ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು, ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ☘☘ಕುದ್ರೋಳಿ: ಬಿರುವೆರ್ ಕುಡ್ಲ, ಕಾರುಣ್ಯಸೇತು ಫೌಂಡೇಷನ್ ಜಂಟಿ ಸೇವಾ ಯೋಜನೆಗೆ ಚಾಲನೆ

ಈ ಪ್ರಕರಣದಲ್ಲಿ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *