Thu. Jun 5th, 2025

Belthangady: ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ:(ಜೂ.3) ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2ರಂದು ನಡೆದಿದೆ.

ಇದನ್ನೂ ಓದಿ: ☘ಉಜಿರೆ: ಅನುಗ್ರಹ ಶಾಲಾ ಪ್ರಾರಂಭೋತ್ಸವ

ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *