Thu. Jun 5th, 2025

Kokkada: ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ – ಆಟೋ ಚಾಲಕ ಶರತ್ ಕುಮಾರ್ ನಿಧನ

ಕೊಕ್ಕಡ:(ಜೂ.3) ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ ಮೃತಪಟ್ಟಿರುವ ದುರ್ಘಟನೆ ಇಂದು ಸಂಭವಿಸಿದೆ.

ಇದನ್ನೂ ಓದಿ: 🟣ನೇಲ್ಯಡ್ಕ: ಸಂಪನ್ನಗೊಂಡ 32ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು( ಜೂ.3) ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *