ಕನ್ಯಾಡಿ:(ಜೂ.4) 2025-26ನೇ ಸಾಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಇದರ ಶಾಲಾ ಪ್ರಾರಂಭೋತ್ಸವವು ವಿಜೃಂಭಣೆಯಿಂದ ನಡೆಯಿತು.

ಪ್ರಸ್ತುತ ವರ್ಷದಲ್ಲಿ ಶಾಲೆಯ ವಿವಿಧ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಸಿಹಿ ಮತ್ತು ಬಲೂನನ್ನು ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕೆ.ನಂದ, ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಭಾರತಿ, ವಸಂತ ನಾಯ್ಕ ಸದಸ್ಯರು ಗ್ರಾಮ ಪಂಚಾಯತ್ ಧರ್ಮಸ್ಥಳ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ್ ರಾವ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಮಕ್ಕಳಿಗೆ ಉಚಿತ ಪಠ್ಯಪುಸ್ತಕವನ್ನು ನೀಡುವ ಮೂಲಕ ಶುಭ ಹಾರೈಸಿದರು.



ಈ ಶುಭ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಮಕ್ಕಳು, ಹಿರಿಯ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

