Fri. Jun 6th, 2025

Suhas Shetty Murder Case: ಸುಹಾಸ್ ಶೆಟ್ಟಿ ಕೊಲೆ ಕೇಸ್​ – ಮತ್ತೋರ್ವ ಆರೋಪಿ ಬಂಧನ

ಮಂಗಳೂರು (ಜೂ.4): ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿತ ಆರೋಪಿ.

ಇದನ್ನೂ ಓದಿ: ☘ಕನ್ಯಾಡಿ: ಕನ್ಯಾಡಿ ಸ.ಉ.ಹಿ.ಪ್ರಾ.ಶಾಲೆ ಪ್ರಾರಂಭೋತ್ಸವ

ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ ಶೆಟ್ಟಿ​ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪವಿದೆ.

3 ತಿಂಗಳ ಹಿಂದೆಯೇ ಸುಹಾಸ್ ಕೊಲೆಗೆ ಸಿದ್ಧವಾಗಿತ್ತು ಸ್ಕೆಚ್:
ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು.

ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿ ಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

Leave a Reply

Your email address will not be published. Required fields are marked *