ಬೆಳ್ತಂಗಡಿ: (ಜೂ.5) ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಸಭಾಸದರಲ್ಲಿ ಮುಖ್ಯ ಅತಿಥಿಯಾಗಿ ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿ ಇಲ್ಲಿಯ ಧರ್ಮ ಗುರುಗಳಾದ ರೆವೆರೆಂಡ್. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು “ಪರಿಸರವನ್ನು ನಾವು ಮೊದಲು ಪ್ರೀತಿಸಬೇಕು. ಪರಿಸರವಿದ್ದರೆ ಶುಚಿಯಾಗಿದ್ದರೆ ಮಾತ್ರ ನಮ್ಮ ಬದುಕು ಸುಂದರ.
ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ನಮ್ಮ ಉಳಿವಿಗಾಗಿ ನಾವು ಪರಿಸರವನ್ನು ಪ್ರೀತಿಸಬೇಕು ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕರಾದ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಶ್ರೀಯುತ ಸಯ್ಯದ್ ಮಹಮ್ಮದ್ ಅಯ್ಯುಬ್ , ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಅರಬಿಕ್ ಶಿಕ್ಷಣದ ಮುಖ್ಯೋಪಾಧ್ಯಾಯರಾದ ಶ್ರೀಯುತ ಶರೀಫ್ ಸಖಾಫಿ ಉಪಸ್ಥಿತರಿದ್ದರು.


ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿ ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನ ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.10 ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಅದರ ಪೋಷಣೆಯನ್ನು ಮಾಡುವರೇ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.


