ಬೆಳ್ತಂಗಡಿ: (ಜೂ.5) ಹೆರಿಗೆಯ ಬಳಿಕ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂ.4ರಂದು ವರದಿಯಾಗಿದೆ.


ಇದನ್ನೂ ಓದಿ: ☘ಉಜಿರೆ: ಉಜಿರೆಯ ಪರಿಶ್ರಮ ಕೋಚಿಂಗ್ ಸೆಂಟರ್ ನಲ್ಲಿ 2025 -26 ನೇ ಸಾಲಿನ ಪ್ರವೇಶಾತಿ ಆರಂಭ
ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಎಂಬವರ ಪತ್ನಿ ಶ್ರೀಮತಿ ಮಧುರಾ (29ವ) ಮೃತಪಟ್ಟ ಮಹಿಳೆಯಾಗಿದ್ದಾರೆ. ಅವರಿಗೆ ಮೂರುವರೆ ವರ್ಷದ ಗಂಡು ಮಗುವಿದೆ. ಮಧುರಾ ಅವರು ಮತ್ತೆ ಗರ್ಭವತಿಯಾಗಿ ಸಂಪಾಜೆಯ ತಾಯಿ ಮನೆಗೆ ತೆರಳಿದ್ದರು.
ಹೆರಿಗೆಗಾಗಿ ಜೂ.2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಜೂ.3ರಂದು ಸಂಜೆ 6.45ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ರಾತ್ರಿ 9 ಗಂಟೆಗೆ ತಾಯಿಗೆ ತೀವ್ರ ರಕ್ತಸ್ರಾವ ಉಂಟಾಗುತ್ತಿದೆ ಎಂದು ಅಲ್ಲಿಯ ವೈದ್ಯರು ತಿಳಿಸಿದ್ದಂತೆ, ಅಂಬ್ಯುಲೆನ್ಸ್‌ನಲ್ಲಿ ಮಧುರಾ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ 12.37ಕ್ಕೆ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ.



