ಮಂಗಳೂರು:(ಜೂ.07) ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ⭕ಧರ್ಮಸ್ಥಳ: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ನಜ್ಜುಗುಜ್ಜಾದ ಆಟೋರಿಕ್ಷಾ
ದಿನಾಂಕ : 04-06-2025 ರಂದು ಬೆಳಿಗ್ಗೆ 8-45 ಗಂಟೆಗೆ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಸರಹದ್ದಿನ ದೇರಳಕಟ್ಟೆ ನಾಟೆಕಲ್ ರೋಡ್‌ನ ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಇರಿಸಲಾಗಿದೆ. 11-00 ಗಂಟೆಯೊಳಗಾಗಿ ಆಸ್ಪತ್ರೆಯನ್ನು ಖಾಲಿ ಮಾಡಬೇಕೆಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಿರುತ್ತಾರೆ. ಈ ಬೆದರಿಕೆಯ ಬಗ್ಗೆ ದೂರು ಬಂದ ಮೇರೆಗೆ 25-30 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಬಾಂಬ್ ನಿಷ್ಕ್ರಿಯ ತಂಡ ಹಾಗೂ ಶ್ವಾನ ದಳ ತಂಡದೊಂದಿಗೆ ಆಸ್ಪತ್ರೆಯ ಸಂಪೂರ್ಣ ಕಟ್ಟಡ ವನ್ನು ಹುಡುಕಾಡಿದ್ದಾರೆ.

ನಂತರ ತಂಡದವರು ಆರೋಪಿ ಪತ್ತೆಗೆ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದಾಗ ತನಿಖೆಯಿಂದ ಪಿ.ಜಿ. ವಿದ್ಯಾರ್ಥಿನಿ ಡಾ. ಶ್ರೀಮತಿ ಚಲಸಾನಿ ಮೋನಿಕಾ ಚೌಧರಿ ಆರೋಪಿಯಾಗಿದ್ದು, ಆಕೆ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದು, ಬೆದರಿಕೆ ಹಾಕಿದ ದಿನಾಂಕದಂದು ನೀಡಬೇಕಾಗಿರುವುದರಿಂದ ಸೆಮಿನಾರ್ ತಪ್ಪಿಸುವ ಉದ್ದೇಶದಿಂದ ಎಸಗಿರುವುದು ತನಿಖೆಯಿಂದ ವಿದ್ಯಾರ್ಥಿನಿ ತಿಳಿದು ಬಂದಿದೆ. ಆರೋಪಿಯನ್ನು ದಿನಾಂಕ : 07-06-2025 ರಂದು ದಸ್ತಗಿರಿ ಮಾಡಿ, ಅವರ ಹೇಳಿಕೆ ಮೇಲೆ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿದೆ.



