Fri. Jun 13th, 2025

Kashipatna: “ನಮ್ಮ ಶಾಲೆ, ನಮ್ಮ ಹೆಮ್ಮೆ” ಎಂಬಂತೆ ಕಾಶಿಪಟ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳ ಭವ್ಯ ಸಾಧನೆ – ಎಸ್‌ಎಸ್‌ಎಲ್‌ಸಿ ಯಲ್ಲಿ ಶೇಕಡಾ.100 ಫಲಿತಾಂಶ ಪಡೆದು ಇತಿಹಾಸ ನಿರ್ಮಾಣ

ಕಾಶಿಪಟ್ಣ:(ಜೂ.12) ಕಾಶಿಪಟ್ಣ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು 2024-25 ನೇ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆದು ಇತಿಹಾಸವನ್ನೇ ನಿರ್ಮಿಸಿದ್ದಾರೆ. “ನಮ್ಮ ಶಾಲೆ, ನಮ್ಮ ಹೆಮ್ಮೆ” ಎಂಬಂತೆ ವಿದ್ಯಾರ್ಥಿಗಳು ತಮ್ಮ ಶಾಲೆಯ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸಿದ್ದಾರೆ.

ಇದನ್ನೂ ಓದಿ: ⭕ತೀರ್ಥಹಳ್ಳಿ: ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತ್ಯು..!


ಈ ವಿಶಿಷ್ಟ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ, ಕಾಶಿಪಟ್ಣ ಗ್ರಾಮ ಪಂಚಾಯತ್ ವತಿಯಿಂದ ಎಲ್ಲಾ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕ ವೃಂದದವರನ್ನು ಪುರ ಮೆರವಣಿಗೆಯಲ್ಲಿ ಘನವಾಗಿ ಕರೆತಂದು ಸನ್ಮಾನಿಸಲಾಯಿತು. ಈ ಸಾಧನೆ ಕಾಶಿಪಟ್ಣ ಗ್ರಾಮದ ಪ್ರಗತಿಗೆ ಹಾಗೂ ಶಿಕ್ಷಣ ಮಟ್ಟದ ಏಳಿಗೆಗೆ ಸಂಕೇತವಾಗಿದ್ದು, ಇನ್ನು ಮುಂದೆ ಹೆಚ್ಚು ವಿದ್ಯಾರ್ಥಿಗಳು ಪ್ರೇರಣೆಯಾಗಲಿದ್ದಾರೆ ಎಂಬುದು ಖಚಿತವಾಗಿದೆ. ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರಬಹುದು ಅಥವಾ ಪಿಡಿಒ ಆಗಿರಬಹುದು ಗ್ರಾಮದ ಎಲ್ಲಾ ಕಾರ್ಯಕ್ರಮಗಳಿಗೆ ಪ್ರೋತ್ಸಾಹವನ್ನು ನೀಡುತ್ತಾರೆ. ತಮ್ಮ ಗ್ರಾಮದ ಪ್ರಗತಿ ಹಾಗೂ ಏಳಿಗೆಗಾಗಿ ಅವರು ದುಡಿಯುತ್ತಾರೆ.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ಹೆಚ್, ಕಾರ್ಯದರ್ಶಿ, ಉಪಾಧ್ಯಕ್ಷರು, ಎಲ್ಲಾ ಸದಸ್ಯರು, ಸಿಬ್ಬಂದಿ ವರ್ಗ, ಹಳೆವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಗರೋಡಿ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರು, ಸದಸ್ಯರು ಹಾಗೂ ಅನೇಕ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು