Sat. Jun 14th, 2025

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಉಜಿರೆ :(ಜೂ.13) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಯೋಗಾಸನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: 🟣ಬೆಳ್ತಂಗಡಿ: ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ನ್ಯೂಟ್ರಿಷನ್ ಮತ್ತು ಡಯಟಿಕ್ಸ್ ವಿಭಾಗದ ಡೀನ್ ಡಾ. ಗೀತಾ.ಬಿ ಶೆಟ್ಟಿ ಹಾಗೂ ಕ್ಲಿನಿಕಲ್ ಯೋಗ (ಎಮ್.ಡಿ) ಪ್ರಥಮ ವರ್ಷದ ವಿದ್ಯಾರ್ಥಿನಿ ಡಾ. ಅಶ್ವಿನಿ.ಎ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ, ಯೋಗದ ಮಹತ್ವದ ಕುರಿತು ಮಾಹಿತಿ ಹಂಚಿಕೊಂಡರು.

ತರಬೇತುದಾರರಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಾದ ದಿವ್ಯ ಬಿ.ಯು ಹಾಗೂ ನಿರ್ವಾಣ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮ ದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Leave a Reply

Your email address will not be published. Required fields are marked *