Tue. Jun 17th, 2025

Mangaluru: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಮಗು ಸಾವು

ಮಂಗಳೂರು:(ಜೂ.17) ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಅಡ್ಯಾರ್‌ಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ.

ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು