ಬಂಟ್ವಾಳ:(ಜೂ.19) ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು,

⭕⭕ಮಂಗಳೂರು: ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ
ಗಂಡನೇ ಹೆಂಡತಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿರುವುದಾಗಿ ತಿಳಿದು ಬಂದಿದೆ.
ಬಳಿಕ ತಾನೂ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ ಅವರ ಪತ್ನಿ ಜಯಂತಿ (45) ಮೃತಪಟ್ಟವರು.

ಘಟನೆಯೂ ಜೂ.19ರ ಗುರುವಾರ ಬೆಳಕಿಗೆ ಬಂದಿದ್ದು, ತಿಮ್ಮಪ್ಪ, ಜಯಂತಿಯವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಎಂಬವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ತಿಮ್ಮಪ್ಪ ಅವರ ಅಣ್ಣ ವಿಶ್ವನಾಥ ಸಜೀಪ ಮೂಡ ಅವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

