ಬೆಳ್ತಂಗಡಿ:(ಜೂ.19) ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಸಿಇಒ ಶ್ರೀ ರಾಜೇಶ್ ಫಡ್ಕೆ, ಇಂಡಸ್ಟ್ರಿ ಡೆವಲಪ್ಮೆಂಟ್ ಮತ್ತು ಸೇಲ್ಸ್ ಮ್ಯಾನೇಜರ್ ಶ್ರೀ ರೋಮಿನ್ ಬೋಸ್ ಮತ್ತು ಶ್ರೀ ರಾಮ ರಾವ್ ಕುಮಾರ್ ರವರು ಜೂನ್ 18 ರಂದು ಸೌತಡ್ಕ,

ಇದನ್ನೂ ಓದಿ: ⭕ಬಂಟ್ವಾಳ: ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಹಾಗೂ
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಮತ್ತು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಕಂಪನಿಯ CSR ನ ಅನುದಾನ ಪತ್ರವನ್ನು ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೊಕ್ಕಡ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಕೃಷ್ಣ ಭಟ್, ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


