Mon. Jun 23rd, 2025

Kanyadi: ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

ಕನ್ಯಾಡಿ : ( ಜೂ. 22) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2,ಶಾಲೆಯಲ್ಲಿ 11ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ” ಒಂದು ಭೂಮಿ,ಒಂದು ಆರೋಗ್ಯ ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.

ಇದನ್ನೂ ಓದಿ: 🧘🏻ಬೆಳ್ತಂಗಡಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ


ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೆ ನಂದ ಇವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾಲಯ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ ಇಲ್ಲಿಯ ಎರಡನೇ ವರ್ಷದ ಬಿ ಎನ್ ವೈ ಎಸ್ (BNYS)ವಿದ್ಯಾರ್ಥಿಗಳಾದ ಕುಮಾರಿ ಪ್ರಾಚ್ಯ ಕೀರ್ತಿ ಮತ್ತು ಕುಮಾರಿ ಸ್ಪೂರ್ತಿ ಕೆ ಎಸ್ ಇವರು ಶಾಲಾ ವಿದ್ಯಾರ್ಥಿಗಳಿಗೆ ಯೋಗವನ್ನು ಹೇಳಿಕೊಡುವ ಮೂಲಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಮಂಜುಳಾ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಹಿರಿಯ ವಿದ್ಯಾರ್ಥಿ ಶ್ರೀಯುತ ಸುದರ್ಶನ್ ಕೆ ವಿ,ಶಾಲಾ ಶಿಕ್ಷಕ ವೃಂದದವರು, ಶಾಲೆಯ ಮಕ್ಕಳು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲೆಯಲ್ಲಿ ಒಂದು ವಾರ ಆಸಕ್ತ ಮಕ್ಕಳಿಗೆ ಕುಮಾರಿ ಪ್ರಾಚ್ಯ ಕೀರ್ತಿ ಮತ್ತು ಕುಮಾರಿ ಸ್ಪೂರ್ತಿ ಕೆ ಎಸ್ ಇವರು ಯೋಗ ಶಿಬಿರ ನಡೆಸಿಕೊಟ್ಟಿದ್ದರು.

Leave a Reply

Your email address will not be published. Required fields are marked *