NEET Examination: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ತಂದೆ ಹಿಗ್ಗಾಮುಗ್ಗಾ ಕೋಲಿನಲ್ಲಿ ಥಳಿಸಿದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ: ⭕ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಅರೆಸ್ಟ್
12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೀಟ್ ಪರೀಕ್ಷೆ ಬರೆದಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆಕೆಗೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಈ ಹಿನ್ನೆಲೆಯಲ್ಲಿ ಕುಪಿತಗೊಂಡ ತಂದೆ ಆಕೆಗೆ ಕೋಲಿನಿಂದ ಸರಿಯಾಗಿ ಬಾರಿಸಿದ್ದಾರೆ.
ಕಳೆದ ಶನಿವಾರ ವಿಶ್ವ ಯೋಗ ದಿನದಂದು ಈ ಘಟನೆ ನಡೆದಿದೆ. ಈ ವಿದ್ಯಾರ್ಥಿನಿಯ ತಂದೆ ಧೊಂಡಿರಾಮ್ ಭೊಸಲೆ ಶಾಲಾ ಪ್ರಾಂಶುಪಾಲರಾಗಿದ್ದು, ನೀಟ್ ಪರೀಕ್ಷೆಯಲ್ಲಿ ಮಗಳ ಕಳಪೆ ಅಂಕಗಳನ್ನು ನೋಡಿ ಕುಪಿತಗೊಂಡಿದ್ದರು. ಹೀಗಾಗಿ ಸಿಟ್ಟಿನಲ್ಲಿದ್ದ ಅವರು ಕರುಣೆ ಇಲ್ಲದೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದಾದ ನಂತರ ತಂದೆ ಶಾಲೆಯಲ್ಲಿ ವಿಶ್ವ ಯೋಗ ದಿನದಂದು ಶಾಲೆಯಲ್ಲಿ ಯೋಗ ಕಾರ್ಯಕ್ರಮ ಆಯೋಜನೆಯಾಗಿದ್ದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಅವರು ಸೀದಾ ಶಾಲೆಗೆ ಹೋಗಿದ್ದಾರೆ.



ಇತ್ತ ಅಪ್ಪನ ಹೊಡೆತದಿಂದ ಮಗಳು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಶಾಲೆಯಿಂದ ಕಾರ್ಯಕ್ರಮ ಮುಗಿಸಿ ಮನೆಗೆ ಬಂದ ವೇಳೆ ಅಪ್ಪನಿಗೆ ಈ ವಿಚಾರ ತಿಳಿದಿದ್ದು, ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಗೆ ಬರುವಷ್ಟರಲ್ಲಿಯೇ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನೆಯ ಬಳಿಕ ವಿದ್ಯಾರ್ಥಿನಿಯ ತಂದೆ ಧೊಂಡಿರಾಮ್ ಭೋಸಲೆ ಅವರನ್ನು ಪೊಲೀಸರು ಬಂಧಿಸಿ ಕಸ್ಟಡಿಗೆ ಪಡೆದಿದ್ದಾರೆ.
