ಬೆಳ್ತಂಗಡಿ:(ಜೂ.26) ಬೆಳ್ತಂಗಡಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು.

ಇದನ್ನೂ ಓದಿ: 🟢ಬೆಳಾಲು : ಬೆಳಾಲು ಪ್ರೌಢಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ
ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ
ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.



