Thu. Jun 26th, 2025

Belthangady: ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

ಬೆಳ್ತಂಗಡಿ:(ಜೂ.26) ಬೆಳ್ತಂಗಡಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು.

ಇದನ್ನೂ ಓದಿ: 🟢ಬೆಳಾಲು : ಬೆಳಾಲು ಪ್ರೌಢಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ

ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

Leave a Reply

Your email address will not be published. Required fields are marked *