Fri. Jun 27th, 2025

Kolkata Law College : ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ

ಕೋಲ್ಕತ್ತಾ(ಜೂ.27): ಕಾನೂನು ವಿದ್ಯಾರ್ಥಿನಿ ಮೇಲೆ ಕಾನೂನು ಕಾಲೇಜಿನ ಆವರಣದಲ್ಲೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕಳೆದ ವರ್ಷವಷ್ಟೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಇದನ್ನೂ ಓದಿ: ⭕PUBG ಆಡುವಾಗ ಶುರುವಾದ ಲವ್‌

ಇದೀಗ ಕಾನೂನು ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ. ಜೂನ್25ರ ಸಂಜೆ 7.30ರಿಂದ 10.50ರ ನಡುವೆ ಈ ಘಟನೆ ನಡೆದಿದೆ.

ಆರೋಪಿಗಳಲ್ಲಿ 31 ವರ್ಷದ ಮೊನೊಜಿತ್ ಮಿಶ್ರಾ,19 ವರ್ಷದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ (20) ಸೇರಿದ್ದಾರೆ. ಜೂನ್ 26 ರ ಸಂಜೆ ಕೋಲ್ಕತ್ತಾದ ತಲ್ಬಗನ್ ಕ್ರಾಸಿಂಗ್ ಬಳಿ ಮಿಶ್ರಾ ಮತ್ತು ಅಹ್ಮದ್ ಅವರನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಪ್ರಮಿತ್ ಮುಖರ್ಜಿಯನ್ನು ಆತನ ಮನೆಯಿಂದ ಬಂಧಿಸಲಾಗಿದೆ. ಪೊಲೀಸರು ಮೂವರ ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ ಕಾಲೇಜಿನೊಳಗೆ ನಡೆದಿದೆ, ಸಂತ್ರಸ್ತೆಯ ಆರಂಭಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಹಲವಾರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಪರಾಧದ ಸ್ಥಳವನ್ನು ಸಹ ಸುತ್ತುವರಿಯಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗಾಗಿ ಕಾಯಲಾಗುತ್ತಿದೆ.

Leave a Reply

Your email address will not be published. Required fields are marked *