Sat. Jun 28th, 2025

Mundaje: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಮುಂಡಾಜೆ: (ಜೂ.28) ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಇದನ್ನೂ ಓದಿ: ⭕ಅಳಿಯನ ಜೊತೆ ಅತ್ತೆ ಪರಾರಿ


ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಸಮರ್ಥ್ ಆರ್ ಗಾಣಿಗೇರ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು. ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳ ಪೊಲೀಸ್ ಠಾಣೆಯವರು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿರುತ್ತಾರೆ.


ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕರದ ನಾರಾಯಣ ಫಡ್ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರೇಂಜರ್ ಲೀಡರ್ ವಸಂತಿ ಸರ್ವರನ್ನೂ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ. ಅರ್ ಧನ್ಯವಾದಗೈದರು.

Leave a Reply

Your email address will not be published. Required fields are marked *